ಬೆಂಗಳೂರು : ರಾಜ್ಯದ ಖಾಸಗಿ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿಯೂ ಸಹ ಜ್ವರದ ಕ್ಲಿನಿಕ್ ಗಳನ್ನು ಸ್ಥಾಪಿಸಿ ಕೋವಿಡ್ 19 ನಿಯಂತ್ರಣಕ್ಕೆ ಸಹಕಾರ ನೀಡುವಂತೆ ಆರೋಗ್ಯ ಇಲಾಖೆ ರಾಜ್ಯದ ಎಲ್ಲ ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಇದರಿಂದ ತಪಾಸಣೆ ಮತ್ತು ಚಿಕಿತ್ಸಾ ಪ್ರಕ್ರಿಯೆ ಇನ್ನಷ್ಟು ವ್ಯಾಪಕ ಹಾಗೂ ಸಮಗ್ರಗೊಳ್ಳಲಿದೆ ಎಂದು ಸಚಿವರು ಹೇಳಿದರು.
ಬೆಂಗಳೂರಿನ ಇ.ಎಸ್.ಐ ಆಸ್ಪತ್ರೆ ಯಲ್ಲಿ ಮೃತರಾದ ವ್ಯಕ್ತಿ ಕೋವಿಡ್ ಗೆ ಸಂಬಂಧವಿಲ್ಲ. ಬೆಂಗಳೂರಿನ ಗರ್ಭಿಣಿ ಮಹಿಳೆಯೊಬ್ಬರು ಇ.ಎಸ್.ಐ ಆಸ್ಪತ್ರೆಯಲ್ಲಿ ಸಿಸೇರಿಯನ್ ಶಸ್ತ್ರ ಚಿಕಿತ್ಸೆ ಬಳಿಕ ಮರಣ ಹೊಂದಿದ್ದು, ಈ ಸಾವು ಕೋವಿಡ್ ಕಾರಣ ಎಂಬ ಸುದ್ದಿಗಳು ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ಇದು ಸತ್ಯಕ್ಕೆ ದೂರವಾದ ಸಂಗತಿ ಎಂದು ಸಚಿವರು ಹೇಳಿದರು
Source : UNI
Follow us on Social media