ಮುಂಬೈ : ಸ್ವಯಂ ಸೇವಾ ಸಂಸ್ಥೆಯೊಂದರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರನ್ನು ಶನಿವಾರ ಬಂಧಿಸಿದ್ದಾರೆ.
- 2002 ರ ಗುಜರಾತ್ ದಂಗೆಗಳ ಬಗ್ಗೆ ಸೆಟಲ್ವಾಡ್ ಪೊಲೀಸರಿಗೆ ಆಧಾರ ರಹಿತ ಮಾಹಿತಿ ನೀಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ.ಇನ್ನು ಸ್ವಯಂ ಸೇವಾ ಸಂಸ್ಥೆಯೊಂದರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತೀಸ್ತಾ ಸೆಟಲ್ವಾಡ್ ಅವರನ್ನು ಬಂಧಿಸಲಾಗಿದ್ದು, ಗುಜರಾತ್ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.