ಮಂಗಳೂರು : ಕುಲಶೇಖರ – ಮೂಡುಬಿದಿರೆ ಸೋಲಾಪುರ ರಾಷ್ಟ್ರೀಯ ಹೆದ್ದಾರಿ 169ರ ಗುರುಪುರ ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ನೂತನ ಸೇತುವೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಮಂಗಳೂರು ಉತ್ತರ ಶಾಸಕ ಡಾ.ಭಾರತ್ ವೈ ಶೆಟ್ಟಿ ಅವರು ಜೂ. 12 ರ ಶುಕ್ರವಾರ ಉದ್ಘಾಟಿಸಿದ್ದಾರೆ.
ಆ ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, “175 ಮೀಟರ್ ಗುರುಪುರ ಸೇತುವೆಯನ್ನು ಪೂರ್ಣಗೊಳಿಸಲು ಟೆಂಡರ್ ಪ್ರಕಾರ ಎರಡು ವರ್ಷಗಳ ಗಡುವು ನೀಡಲಾಗಿದ್ದರೂ 16 ತಿಂಗಳಲ್ಲಿ ಪೂರ್ಣಗೊಂಡಿದೆ ಎಂದು ಹೇಳಲು ಸಂತೋಷವಾಗುತ್ತಿದೆ ಎಂದರು.
ಸಂಸದ ನಳಿನ್ ಕುಮಾರ್ ಕಟೀಲ್ ಅವರು, “ಗುರುಪುರ ಸೇತುವೆ ನಿರ್ಮಾಣದ ಸಮಯವೇ ಒಂದು ದಾಖಲೆಯಾಗಿದೆ . ಮೊಗರೋಡಿ ಕನ್ ಸ್ಟ್ರಕ್ಷನ್ ಕೇವಲ ಒಂದೂವರೆ ವರ್ಷದಲ್ಲಿ ಸೇತುವೆ ನಿರ್ಮಾಣ ಮಾಡಿ ದಾಖಲೆ ನಿರ್ಮಿಸಿದೆ. ಮುಲರಪಟ್ನಾ ಸೇತುವೆ ಧಿಡೀರ್ ಕುಸಿತ ಕಂಡಾಗ , ಹಳೆಯ ಗುರುಪುರ ಸೇತುವೆಯ ಬಗ್ಗೆ ಎಚ್ಚರಿಕೆ ವಹಿಸಿ ಹೊಸ ಸೇತುವೆ ನಿರ್ಮಿಸಲು ನಿರ್ಧರಿಸಲಾಯಿತು. 39.42 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣದ ಸೇತುವೆ ಇದೀಗ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಂಡಿದೆ ಎಂದರು.
Follow us on Social media