ಬೆಳ್ತಂಗಡಿ : ತಾಲೂಕಿನ ಗುರುವಾಯನಕೆರೆ ಅರಪ ಮಾರ್ಬಲ್ಸ್ ಬಳಿ ರಸ್ತೆ ಅಪಘಾತ ನಡೆದಿದ್ದು, ಸ್ಥಳದಲ್ಲೇ ಸ್ಥಳೀಯ ಎಟಿಎಂ ವಾಚ್ ಮ್ಯಾನ್ ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು ಎಟಿಎಂ ವಾಚ್ ಮ್ಯಾನ್ ಲಿಂಗಪ್ಪ ಮೂಲ್ಯ(62) ಎಂದು ಗುರುತಿಸಲಾಗಿದೆ.ಲಿಂಗಪ್ಪ ಅವರು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ನಡೆದಿದೆ. ಅಪಘಾತ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಬೆಳ್ತಂಗಡಿ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Follow us on Social media