ಬೆಂಗಳೂರು: ರಾಜ್ಯದ 5,762 ಗ್ರಾಮ ಪಂಚಾಯತಿಗಳ ಚುನಾವಣೆಗೆ ಇಂದು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ.
ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ಡಿಸೆಂಬರ್ 22 ಮತ್ತು 27ರಂದು ಮತದಾನ ನಡೆಯಲಿದೆ. ಡಿಸೆಂಬರ್ 30ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಡಾ.ಬಸವರಾಜು ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಮೊದಲ ಹಂತದ ಚುನಾವಣೆ ಡಿಸೆಂಬರ್ 11 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು, ಹಿಂಪಡೆಯಲು 14 ಕೊನೆಯ ದಿನಾಂಕವಾಗಿದೆ.
ಎರಡನೆ ಹಂತದ ಚುನಾವಣೆಗೆ ಡಿಸೆಂಬರ್ 16 ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಹಾಗೂ ಡಿಸೆಂಬರ್ 19 ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿದೆ. ಇಂದಿನಿಂದಲೇ ರಾಜ್ಯವ್ಯಾಪಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ ಎಂದು ಅವರು ತಿಳಿಸಿದರು.
ಡಿಸೆಂಬರ್ 7 ರಂದು ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆಗೆ ಅಧಿಸೂಚನೆ ಹೊರಬೀಳಲಿದೆ. 92121 ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 2,930 ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ. 2ನೇ ಹಂತದಲ್ಲಿ 2832 ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ ಎಂದು ಅವರು ತಿಳಿಸಿದರು.
ಡಿಸೆಂಬರ್ 11 ರಂದು ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ನಾಮಪತ್ರ ಪರಿಶೀಲನೆಗೆ ಡಿಸೆಂಬರ್ 16 ಕೊನೆ ದಿನ. ಡಿಸೆಂಬರ್ 30ಕ್ಕೆ ಪಂಚಾಯತಿ ಚುನಾವಣೆ ಫಲಿತಾಂಶ ಹೊರಬೀಳುವ ನಿರೀಕ್ಷೆ ಇದೆ. ಡಿಸೆಂಬರ್ 11 ರಂದು ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನಾಮಪತ್ರ ಪರಿಶೀಲನೆಗೆ ಡಿಸೆಂಬರ್ 16 ಕೊನೆ ದಿನ. ಡಿಸೆಂಬರ್ 30ಕ್ಕೆ ಪಂಚಾಯತಿ ಚುನಾವಣೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಡಾ.ಬಸವರಾಜು ತಿಳಿಸಿದರು.
Follow us on Social media