ಚಿಕ್ಕಮಗಳೂರು: ಸುಳ್ಳು ಮತ್ತು ಸಿದ್ದರಾಮಯ್ಯ ಒಂದೇ ನಾಣ್ಯದ ಎರಡು ಮುಖಗಳು. ಸತ್ಯ ಮತ್ತು ಸಿದ್ದರಾಮಯ್ಯ ಎಣ್ಣೆ-ಸಿಗೇಕಾಯಿ ಇದ್ದಂತೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ಮೋದಿಯವರು ಆಕ್ಸಿಜನ್ ಕೊಡಲಿಲ್ಲ, ಈಗ ಯೋಗಕ್ಕೆ ಬಂದಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಿ.ಟಿ.ರವಿ, ಸುಳ್ಳು ಹೇಳುವುದರಲ್ಲಿ ಅವರಂತಹಾ ನಿಷ್ಟಾವಂತರು ಬೇರೆ ಯಾರಿಲ್ಲ. ಸುಳ್ಳಿಗೆ ಪ್ರಶಸ್ತಿ ನೀಡುವುದಾದರೆ ಸಿದ್ದರಾಮಯ್ಯ ಬಿಟ್ಟು ಬೇರೆ ಯಾರಿಗೂ ಸಿಗಲ್ಲ ಎಂದು ವ್ಯಂಗ್ಯವಾಡಿದ್ದಾರೆ.ಇನ್ನು ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿದ್ದರೂ ಆಕ್ಸಿಜನ್ ಪ್ಲಾಂಟ್ ಹಾಕಿಲ್ಲ. ಪ್ರತಿ ಆಸ್ಪತ್ರೆಗೂ ಆಕ್ಸಿಜನ್ ಪ್ಲಾಂಟ್ ಹಾಕಿದ್ದು ಪಿಎಂ ಕೇರ್ ನಲ್ಲಿ. ತ್ವರಿತ ನಿರ್ಧಾರ ಕೈಗೊಂಡರು. ಇಲ್ಲವಾದರೆ ಸಾವಿನ ಪ್ರಮಾಣ 10 ಪಟ್ಟು ಹೆಚ್ಚಾಗುತ್ತಿತ್ತು ಎಂದಿದ್ದಾರೆ.
Follow us on Social media