ಬೆಂಗಳೂರು : ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದಾಗಿ ಘೋಷಿಸಲಾಗಿರುವ 21 ದಿನಗಳ ಲಾಕ್ ಡೌನ್ ನಿಂದಾಗಿ ರಾಜ್ಯದಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಸರ್ಕಾರ ಅಗತ್ಯ ವ್ಯವಸ್ಥೆ ಕಲ್ಪಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಈ ಕುರಿತು ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು, ಜನ ಸಾಮಾನ್ಯರಿಗೆ ಅಗತ್ಯವಾಗಿರುವ ಹಣ್ಣು ತರಕಾರಿ, ದಿನಸಿ ಪದಾರ್ಥಗಳು, ರೈತರಿಗೆ ಗೊಬ್ಬರ, ಬಿತ್ತನೆ ಬೀಜ, ಕೀಟ ನಾಶಕಗಳನ್ನು ಮನೆಯ ಆಸುಪಾಸಿನಲ್ಲೇ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.
