ಕುಲ್ಗಾಂ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್’ಕೌಂಟರ್ ನಡೆಸಿದ್ದು, 3 ಉಗ್ರರನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಕುಲ್ಗಾಂ ಜಿಲ್ಲೆಯ ನಾಗ್ನಾಡ್-ಚಿಮ್ಮರ್ ಎಂಬ ಪ್ರದೇಶದಲ್ಲಿ ಇಂದು ಬೆಳಗಿನ ಜಾವ ಎನ್ಕೌಂಟರ್ ನಡೆಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಉಗ್ರರು ಅಡಗಿಕುಳಿತಿರುವ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಸೇನಾಪಡೆ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕಾರ್ಯಾಚರಣೆ ಚುರುಕುಗೊಳಿಸಿದ ಭದ್ರತಾಪಡೆಗಳು ಇದೀಗ 3 ಉಗ್ರರನ್ನು ಹತ್ಯೆ ಮಾಡಿದೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.
ಜುಲೈ 5 ರಂದು ಕುಲ್ಗಾಮ್ನ ಅರೆಹ್ ಎಂಬ ಗ್ರಾಮದಲ್ಲಿ ಎನ್ಕೌಂಟರ್ ನಡೆಸಿದ್ದ ಭದ್ರತಾಪಡೆಗಳು ಇಬ್ಬರು ಉಗ್ರರನ್ನು ಹತ್ಯೆ ಮಾಡಿತ್ತು.
Follow us on Social media