ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರನ್ನು ಹತ್ಯೆಗೈಯುವಲ್ಲಿ ಭಾರತೀಯ ಸೇನೆ ಮತ್ತೆ ಸಫಲವಾಗಿದೆ. ಶನಿವಾರ ನಸುಕಿನ ಜಾವ ಮತ್ತೆ ಎನ್ ಕೌಂಟರ್ ನಡೆದಿದ್ದು ಇಬ್ಬರು ಉಗ್ರರು ಹತರಾಗಿದ್ದಾರೆ.
ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ನಿಪೊರಾ ಪ್ರದೇಶದಲ್ಲಿ ಎನ್ ಕೌಂಟರ್ ಇಂದು ನಸುಕಿನ ಜಾವ ಆರಂಭವಾಯಿತು. ಅದರಲ್ಲಿ ಇಬ್ಬರು ಅಪರಿಚಿತ ಉಗ್ರರನ್ನು ಭಾರತೀಯ ಸೇನೆ ಯೋಧರು ಹತ್ಯೆಗೈದಿದ್ದಾರೆ. ಸ್ಥಳದಲ್ಲಿ ಶೋಧ ಕಾರ್ಯ ಮುಂದುವರಿದಿದೆ. ಹೆಚ್ಚಿನ ಮಾಹಿತಿ ಸಿಗಬೇಕಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
Follow us on Social media