ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಬುದ್ಗಾಮ್ ಜಿಲ್ಲೆಯ ಬಿಜೆಪಿಯ ಇತರ ಹಿಂದುಳಿದ ವರ್ಗಗಳ(ಒಬಿಸಿ)ಮೋರ್ಚಾ ಜಿಲ್ಲಾಧ್ಯಕ್ಷ ಅಬ್ದುಲ್ ಹಮೀದ್ ನಜರ್ ಮೇಲೆ ಉಗ್ರಗಾಮಿಗಳು ಗುಂಡಿಕ್ಕಿದ್ದು ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪರಿಚಿತ ಉಗ್ರರಿಂದ ಅಬ್ದುಲ್ ಹಮೀದ್ ನಜರ್ ದಾಳಿಗೀಡಾಗಿದ್ದಾರೆ. ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬುದ್ಗಾಮ್ ಎಎಸ್ಪಿ ತಿಳಿಸಿದ್ದಾರೆ.
ಇನ್ನೊಂದೆಡೆ ಮತ್ತೆ ಪಾಕಿಸ್ತಾನ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಮಂಕೊಟೆ ವಲಯದಲ್ಲಿ ಕದನ ವಿರಾಮ ಉಲ್ಲಂಘಿಸಿದೆ. ಅದಕ್ಕೆ ತಕ್ಕ ಪ್ರತ್ಯುತ್ತರವನ್ನು ಭಾರತೀಯ ಸೇನೆ ನೀಡಿದೆ ಎಂದು ತಿಳಿದುಬಂದಿದೆ.
Follow us on Social media