ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿ ಮುಂದುವರಿದಿದೆ.
ಇಂದು ನಸುಕಿನ ವೇಳೆ ನಡೆದ ದಾಳಿಯಲ್ಲಿ ಲಷ್ಕರ್ ಎ ತೊಯ್ಬಾದ ಓರ್ವ ಉಗ್ರ ಸಿಕ್ಕಿಬಿದ್ದಿದ್ದಾನೆ. ಉಗ್ರನನ್ನು ಮೊಹಮ್ಮದ್ ಯೂಸಫ್ ಖಾನ್ ನ ಪುತ್ರ ಜಾಕಿರ್ ಖಾನ್ ಎಂದು ಗುರುತಿಸಲಾಗಿದ್ದು ಶೋಪಿಯಾನ್ ನಿವಾಸಿಗಳಾಗಿದ್ದಾರೆ.
ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕೊಜಪುರದಲ್ಲಿ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ ಪಡೆ ಯೋಧರು ಬಂಧಿಸಿದ್ದಾರೆ. ಆತನ ಬಳಿಯಿಂದ 9ಎಂಎಂ ಪಿಸ್ತೂಲ್ ಮತ್ತು ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.
ಉಗ್ರ ಸಂಬಂಧಿ ಚಟುವಟಿಕೆಗಳಲ್ಲಿ ಜಾಕಿರ್ ಭಾಗಿಯಾಗಿದ್ದಾನೆ ಎಂದು ನಿಖರ ಮಾಹಿತಿ ಪಡೆದ ಪೊಲೀಸರು ಖೊಜ್ ಪುರ ರೆಬಾನ್ ಗ್ರಾಮದಲ್ಲಿ ದಾಳಿ ನಡೆಸಿದರು. ಇತ್ತೀಚೆಗೆ ಆತ ಉಗ್ರ ಪಡೆಗೆ ಸೇರಿದ್ದು ಅದರಲ್ಲಿ ಸಕ್ರಿಯನಾಗಲು ಹೊರಟಿದ್ದ.
ಈ ಸಂಬಂಧ ಪೊಲೀಸರು ಕೇಸು ದಾಖಲಿಸಿ ಹೆಚ್ಚಿನ ವಿಚಾರಣೆ ನಡೆಯಬೇಕಿದೆ. ಈ ವರ್ಷ 20ಕ್ಕೂ ಹೆಚ್ಚು ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ.
Follow us on Social media