ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಣಿವೆಯಲ್ಲಿ ಭಯೋತ್ಪಾದಕರ ಗುಂಡೇಟಿಗೆ ವೀರ ಯೋಧ ಹುತಾತ್ಮರಾಗಿರುವ ಘಟನೆ ಇಂದು ನಡೆದಿದೆ.
ಅನಂತನಾಗ್ ಜಿಲ್ಲೆಯ ಕೋಕರ್ನಾಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಪ್ರಮುಖ ಕಾರ್ಯಾಚರಣೆಯನ್ನು ಆರಂಭಿಸಿದ್ದವು. ವಾಟ್ನಾರ್ ಪ್ರದೇಶದ ಅಡಗುತಾಣದಲ್ಲಿ ಕೆಲವು ಭಯೋತ್ಪಾದಕರು ಇರುವ ಬಗ್ಗೆ ಏಜೆನ್ಸಿಗಳಿಗೆ ಮಾಹಿತಿ ಸಿಕ್ಕಿತ್ತು. ಇದಾದ ಬಳಿಕ ಇಡೀ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದರು.
ಈ ವೇಳೆ ಘಟನಾ ಸ್ಥಳದ ಎಲ್ಲಾ ಪ್ರವೇಶ ಮತ್ತು ನಿರ್ಗಮನ ಮಾರ್ಗಗಳನ್ನು ಮುಚ್ಚಲಾಗಿತ್ತು. ಉಗ್ರರಿಗೆ ಶರಣಾಗುವಂತೆ ಹೇಳಲಾಯಿತು. ಆದರೆ, ಅಷ್ಟರಲ್ಲಿ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ಆರಂಭಿಸಿದರು. ಈ ವೇಳೆ ಯೋಧನೊಬ್ಬ ಹುತಾತ್ಮರಾದರು. ಭದ್ರತಾ ಪಡೆಗಳು ಪ್ರತಿದಾಳಿ ನಡೆಸುತ್ತಿವೆ. ಈ ಪ್ರದೇಶದಲ್ಲಿ ಕೆಲವು ಭಯೋತ್ಪಾದಕರನ್ನು ಸುತ್ತುವರಿಯಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Follow us on Social media