ಮುಂಬಯಿ: ಪ್ರಪಂಚದ ಅತಿದೊಡ್ಡ ಗ್ರಾಹಕ ಕೇಂದ್ರಿತ ಪ್ರೈವೇಟ್ ಈಕ್ವಿಟಿ ಸಂಸ್ಥೆಗಳಲ್ಲೊಂದಾದ ಎಲ್ ಕ್ಯಾಟರ್‌ಟನ್‌ನಿಂದ 1894.50 ಕೋಟಿ ರೂ.ಗಳ ಹೂಡಿಕೆಯನ್ನು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (“ರಿಲಯನ್ಸ್ ಇಂಡಸ್ಟ್ರೀಸ್”) ಹಾಗೂ ಭಾರತದ ಮುಂಚೂಣಿ ಡಿಜಿಟಲ್ ಸೇವೆಗಳ ವೇದಿಕೆ ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್ (“ಜಿಯೋ ಪ್ಲಾಟ್‌ಫಾರ್ಮ್ಸ್”) ಘೋಷಿಸಿವೆ.
ಈ ಹೂಡಿಕೆಯು ಜಿಯೋ ಪ್ಲಾಟ್‌ಫಾರ್ಮ್ಸ್‌ನ ಈಕ್ವಿಟಿ ಮೌಲ್ಯವನ್ನು 4.91 ಲಕ್ಷ ಕೋಟಿ ರೂ.ಗಳಿಗೆ ಹಾಗೂ ಎಂಟರ್‌ಪ್ರೈಸ್ ಮೌಲ್ಯವನ್ನು 5.16 ಲಕ್ಷ ಕೋಟಿ ರೂ.ಗಳಿಗೆ ಕೊಂಡೊಯ್ಯಲಿದೆ. ಎಲ್ ಕ್ಯಾಟರ್‌ಟನ್‌ನ ಹೂಡಿಕೆಯು ಫುಲ್ಲಿ ಡೈಲ್ಯೂಟೆಡ್ ಬೇಸಿಸ್‌ನಲ್ಲಿ ಜಿಯೋ ಪ್ಲಾಟ್‌ಫಾರ್ಮ್ಸ್‌ನ ಶೇ.0.39ರಷ್ಟು ಈಕ್ವಿಟಿ ಪಾಲುದಾರಿಕೆಗೆ ಸಮಾನವಾಗಿರಲಿದೆ. ಈ ಹೂಡಿಕೆಯೊಂದಿಗೆ, ಏಪ್ರಿಲ್ 22, 2020ರಿಂದ ಇಲ್ಲಿಯವರೆಗಿನ ಅವಧಿಯಲ್ಲಿ ಫೇಸ್‌ಬುಕ್, ಸಿಲ್ವರ್ ಲೇಕ್, ವಿಸ್ತಾ ಈಕ್ವಿಟಿ ಪಾರ್ಟ್‌ನರ್ಸ್, ಜನರಲ್ ಅಟ್ಲಾಂಟಿಕ್, ಕೆಕೆಆರ್, ಮುಬಾದಲ, ಎಡಿಐಎ, ಟಿಪಿಜಿ ಹಾಗೂ ಎಲ್ ಕ್ಯಾಟರ್‌ಟನ್ ಸೇರಿದಂತೆ ಮುಂಚೂಣಿ ಜಾಗತಿಕ ಹೂಡಿಕೆದಾರರಿಂದ ಜಿಯೋ ಪ್ಲಾಟ್‌ಫಾರ್ಮ್ಸ್ 104,326.95 ಕೋಟಿ ರೂ.ಗಳ ಹೂಡಿಕೆ ಪಡೆದುಕೊಂಡಂತಾಗಿದೆ.
Follow us on Social media