ಮಂಗಳೂರು : ಮಂಗಳೂರು ಆರ್.ಟಿ.ಓ. ಕಚೇರಿಯಲ್ಲಿ ವಿವಿಧ ಖಾಸಗಿ ಬಸ್ಸು ವಾಹನ ಮಾಲಿಕರ ಸಭೆ ನಡೆಸಿ, ರಾಜ್ಯ ಸರ್ಕಾರ ಸೂಚಿಸಿದ ಮಾರ್ಗಸೂಚಿ ಪ್ರಕಾರ, ಜೂನ್ 1 ರಿಂದ ಖಾಸಗಿ ಬಸ್ಸುಗಳನ್ನು ಓಡಿಸುವ ಬಗ್ಗೆ ತೀರ್ಮಾನಿಸಲಾಯಿತು.
ಪ್ರಾರಂಭಿಕ ಹಂತದಲ್ಲಿ ಕೆಲವೇ ಬಸ್ಸುಗಳ ಓಡಾಟವನ್ನು ಪ್ರಾರಂಭಿಸಿ, ಪ್ರಯಾಣಿಕರ ಬೇಡಿಕೆ ಮೇರೆಗೆ, ಜನಸಂದಣಿ, ಸಾಮಾಜಿಕ ಅಂತರ ಕಾಪಾಡುವ ಹಿನ್ನೆಲೆಯಲ್ಲಿ ಬಸ್ಸುಗಳ ಸಂಖ್ಯೆ ಕ್ರಮೇಣ ಜಾಸ್ತಿ ಮಾಡಲು, ಖಾಸಗಿ ಬಸ್ಸುಗಳ ಮಾಲೀಕರಿಗೆ ತಿಳಿಸಲಾಗಿದೆ.
ಸಾರ್ವಜನಿಕರು ಸಾಮಾಜಿಕ ಅಂತರ, ಮಾಸ್ಕ್, ಹಾಗೂ ಕೈಗಳಿಗೆ ಸ್ಯಾನಿಟೈಜರ್ ಬಳಸುವುದು ಹಾಗೂ ತಮ್ಮದೇ ಆದ ಆಹಾರ, ನೀರು ಉಪಯೋಗಿಸುವುದು. ಕಡ್ಡಾಯ ಶೇಕಡಾ 50ರಷ್ಟು ಪ್ರಯಾಣಿಕರು ಮಾತ್ರ ಬಸ್ಸಿನಲ್ಲಿ ಸಂಚರಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ.