ರಾಜ್ಕೋಟ್ : ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಸರಣಿಯನ್ನು ಜೀವಂತವಾಗಿ ಉಳಿಸಿಕೊಂಡಿದೆ. ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿದೆ.
ರಾಜ್ಕೋಟ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 169 ರನ್ ಬಾರಿಸಿತ್ತು. ಈ ರನ್ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 87 ರನ್ ಗಳಿಗೆ ಸರ್ವಪತನ ಕಂಡಿದ್ದು 82 ರನ್ ಗಳಿಂದ ಟೀಂ ಇಂಡಿಯಾಗೆ ಶರಣಾಗಿದೆ.
ಅವೇಶ್ ಖಾನ್ ಆಕ್ರಮಣಕಾರಿ ಬೌಲಿಂಗ್ ದಾಳಿಗೆ ದಕ್ಷಿಣ ಆಫ್ರಿಕಾದ ಬ್ಯಾಟರ್ ಗಳು ಪೆವಿಲಿಯನ್ ಪರೇಡ್ ನಡೆಸಿದರು. ಅವೇಶ್ ಖಾನ್ 18 ರನ್ ನೀಡಿ 4 ವಿಕೆಟ್ ಪಡೆದಿದ್ದಾರೆ. ದಕ್ಷಿಣ ಆಫ್ರಿಕಾ ಪರ ಬ್ಯಾಟಿಂಗ್ ಡಿಕಾಕ್ 14, ದುಸೇನ್ 20, ಜೇಸನ್ 12 ರನ್ ಬಾರಿಸಿದ್ದಾರೆ. ಟೀಂ ಇಂಡಿಯಾ ಅವೇಶ್ ಖಾನ್ 4, ಯಜುವೇಂದ್ರ ಚಹಾಲ್ 2, ಹರ್ಷಲ್ ಪಟೇಲ್ ಮತ್ತು ಅಕ್ಷರ್ ಪಟೇಲ್ ತಲಾ 1 ವಿಕೆಟ್ ಪಡೆದಿದ್ದಾರೆ.
ಆರಂಭಿಕರಾಗಿ ಕಣಕ್ಕಿಳಿದ ರಿತುರಾಜ್ ಗಾಯಕ್ವಾಡ್ 5 ರನ್ ಗಳಿಸಿ ಔಟಾದರೆ, ಇಶಾನ್ ಕಿಶನ್ 27 ರನ್ ಗಳಿಸಿದ್ದಾರೆ. ಇನ್ನು ಯುವ ಆಟಗಾರ ಶ್ರೇಯಸ್ ಅಯ್ಯರ್ 4 ವಿಕೆಟ್ ಗಳಿಗೆ ಔಟಾಗಿ ಪೆವಿಲಿಯನ್ ಸೇರಿದರು. ರಿಷಬ್ ಪಂತ್ 17, ಹಾರ್ದಿಕ್ ಪಾಂಡ್ಯ 46, ದಿನೇಶ್ ಕಾರ್ತಿಕ್ 55 ರನ್ ಬಾರಿಸಿದ್ದಾರೆ.
ದಕ್ಷಿಣ ಆಫ್ರಿಕಾ ಪರ ಜಸೇನ್, ಎನ್ಗಡಿ ಮತ್ತು ಅನ್ರಿಚ್ ನಾರ್ಟ್ಜೆ ತಲಾ 1 ವಿಕೆಟ್ ಪಡೆದಿದ್ದಾರೆ.
Follow us on Social media