ಪುದುಚೇರಿ: ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ನಂತರ ಇದೀಗ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲೂ 10ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದ್ದು, ಪರೀಕ್ಷೆ ಇಲ್ಲದೆಯೇ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಲು ನಿರ್ಧರಿಸಲಾಗಿದೆ.
10ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಬೋರ್ಡ್ ಪರೀಕ್ಷೆ ರದ್ದುಗೊಳಿಸಲಾಗಿದ್ದು, ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಪಾಸ್ ಮಾಡಲಾಗುವುದು ಎಂದು ಪುದುಚೇರಿ ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಅವರು ಹೇಳಿದ್ದಾರೆ.
ನಿನ್ನೆಯಷ್ಟೇ, ಪುದುಚೇರಿಯಲ್ಲಿ 10ನೇ ತರಗತಿ ಮಕ್ಕಳಿಗೆ ಆನ್ ಲೈನ್ ತರಗತಿ ನಡೆಸುವುದು ಅಷ್ಟು ಸುಲಭವಲ್ಲ. ಏಕೆಂದರೆ ಗ್ರಾಮೀಣ ಪ್ರದೇಶದಲ್ಲಿರುವ ಮಕ್ಕಳ ಬಳಿ ಸ್ಮಾರ್ಟ್ ಫೋನ್ ಗಳು ಇಲ್ಲ ಎಂದು ಸಿಎಂ ನಾರಾಯಣಸ್ವಾಮಿ ಅವರು ಹೇಳಿದ್ದರು.
ಇಂದು ಬೆಳಗ್ಗೆಯಷ್ಟೇ 10ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿ, ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಿ ತಮಿಳುನಾಡು ಸರ್ಕಾರ ಆದೇಶ ಹೊರಡಿಸಿದೆ.
Follow us on Social media