Breaking News

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೇ 17 ರವರೆಗೆ ರಾತ್ರಿ ನಿಷೇಧಾಜ್ಞೆ- ಜಿಲ್ಲಾಧಿಕಾರಿ ಆದೇಶ

ಮಂಗಳೂರು : ಜಿಲ್ಲೆಯಾದ್ಯಂತ ಮೇ.17 ರವರೆಗೆ ರಾತ್ರಿ ದ.ಕ. ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 (ಕೊರೊನಾ ವೈರಾಣು ಕಾಯಿಲೆ 2019)ರ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಸರಕಾರದ ಆದೇಶದಲ್ಲಿ ನೀಡಿದ ಸಡಿಲಿಕೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 (3) ರನ್ವಯ ಮೇ 4 ರಿಂದ 17 ರವರೆಗೆ ಪ್ರತಿ ದಿನ ಸಂಜೆ 7 ಗಂಟೆಯಿಂದ ಬೆಳಿಗ್ಗೆ 7 ಗಂಟೆಯವರೆಗೆ ನಿಷೇಧಾಜ್ಞೆಯನ್ನು ವಿಧಿಸಿ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದೇಶಿಸಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×