ನವದೆಹಲಿ : ಭಾರತದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಕೇವಲ 24 ಗಂಟೆಗಳಲ್ಲಿ ಬರೋಬ್ಬರಿ 4,987 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 90,000 ಗಡಿ ದಾಟಿದೆ.
ಇನ್ನು ಶನಿವಾರ ಒಂದೇ ದಿನ ದೇಶದಲ್ಲಿ 120 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 2,872ಕ್ಕೇ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ನಿನ್ನೆ ಒಂದೇ ದಿನ ದಿನ 4,987 ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 90,927ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ನಿರಂತರವಾಗಿ ವ್ಯಾಪಿಸುತ್ತಲೇ ಇದ್ದು, ಸೋಂಕಿತರ ಪ್ರಕರಣಗಳ ಸಂಖ್ಯೆ 30 ಸಾವಿರ ದಾಟಿದೆ.
ಶನಿವಾರ ಒಂದೇ ದಿನ ಮಹಾರಾಷ್ಟ್ರದಲ್ಲಿ 1,606 ಪ್ರಕರಣಗಳು ಪತ್ತೆಯಾಗಿದ್ದು, 67 ಮಂದಿ ಸಾವಿಗೀಡಾಗಿದ್ದಾರೆ. ಇದೇ ವೇಳೆ ಮಹಾರಾಷ್ಟ್ರ ಹಾಗೂ ತಮಿಳುನಾಡಿನ ಬಳಿಕ ಗುಜರಾತಿನಲ್ಲಿ ಸೋಂಕಿತರ ಸಂಖ್ಯೆ 10 ಸಾವಿರ ಗಡಿ ದಾಡಿದೆ. ಶನಿವಾರ 709 ಪ್ರಕರಣಗಳು ದಾಖಲಾಗಿವೆ.
Follow us on Social media