ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಳದ ವೇಗ ಏರಿಕೆಯಾಗಿದ್ದು, 24 ಗಂಟೆಗಳಲ್ಲಿ 991 ಹೊಸ ಪ್ರಕರಣಗಳು ಪತ್ತೆಯಾಗಿವೆ., ಅಲ್ಲದೆ, 43 ಮಂದಿ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.
ದೇಶದಾದ್ಯಂತ ಒಟ್ಟು 14,378 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರಲ್ಲಿ 1992 ಮಂದಿ ವೈರಸ್’ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಇನ್ನು ಶುಕ್ರವಾರದಿಂದ ಇಲ್ಲಿಯವರೆಗೆ ಮತ್ತೆ ವೈರಸ್’ಗೆ 43 ಮಂದಿ ಬಲಿಯಾಗಿದ್ದು, ದೇಶದಲ್ಲಿ ಸಾವಿನ ಸಂಖ್ಯೆ 480ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರ ರಾಜ್ಯದಲ್ಲಿ ಒಟ್ಟು 3,323 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಸೋಂಕಿನಿಂದ ಈಗಾಗಲೇ 201 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಅತಿ ಹೆಚ್ಚು ಸಾವು ಮಹಾರಾಷ್ಟ್ರದಲ್ಲಿ ದಾಖಲಾಗಿದೆ.
ಇನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಟ್ಟು1,707 ಪ್ರಕರಣಗಳು ಪತ್ತೆಯಾಗಿದ್ದರೆ, 42 ಮಂದಿ ಸಾವಿಗೀಡಾಗಿದ್ದಾರೆ. ತಮಿಳುನಾಡಿನಲ್ಲಿ 1,323 ಪ್ರಕರಣಗಳು,15 ಮಂದಿ ಸಾವು, ರಾಜಸ್ಥಾನದಲ್ಲಿ 1,229 ಪ್ರಕರಣಗಳು, 11 ಮಂದಿ ಸಾವಿಗೀಡಾಗಿದ್ದಾರೆ.
ಕರ್ನಾಟಕದಲ್ಲಿ 359 ಸೋಂಕು ಪ್ರಕರಣಗಳು ದಾಖಲಾಗಿದ್ದು, 13 ಮಂದಿ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದಲ್ಲಿ 1,310 ಸೋಂಕು ಪ್ರಕರಣಗಳ ಪೈಕಿ 69 ಮಂದಿ ಬಲಿಯಾಗಿದ್ದಾರೆ. ಆಂಧ್ರ ಪ್ರದೇಶದಲ್ಲಿ 572 ಪ್ರಕರಣ,14 ಮಂದಿ ಸಾವು ಹಾಗೂ ತೆಲಂಗಾಣದಲ್ಲಿ 776 ಪ್ರಕರಣಗಳು,18 ಜನ ಸಾವಿಗೀಡಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಸೋಂಕು ಪ್ರಕರಣ 849 ತಲುಪಿದ್ದರೆ, 14 ಮಂದಿ ಮೃತಪಟ್ಟಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
Follow us on Social media