ನವದೆಹಲಿ: ಲಾಕ್’ಡೌನ್ ತೆರವಿಗೆ ಇನ್ನೂ 3 ದಿನಗಳು ಬಾಕಿ ಇರುವಾಗಲೇ ದೇಶದಲ್ಲಿ ಕೊರೋನಾ ಸಾವಿನ ಸಂಖ್ಯೆ ಶುಕ್ರವಾರ ದಾಖಲೆ ಪ್ರಮಾಣದ ಏರಿಕೆ ಕಂಡಿದೆ. ಮಹಾಮಾರಿ ವೈರಾಣುವಿಗೆ ಈ ವರೆಗೆ ಭಾರತದಲ್ಲಿ ಬಲಿಯಾದವರ ಸಂಖ್ಯೆ 1147ಕ್ಕೆ ಏರಿಕೆಯಾಗಿದೆ.
ಇದೇ ವೇಳೆ ದೇಶದಲ್ಲಿ 24 ಗಂಟೆಗಳಲ್ಲಿ 1,993 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರಂತೆ ಒಟ್ಟಾರೆ ಸೋಂಕಿತರ ಸಂಖ್ಯೆ 35043ಕ್ಕೆ ಏರಿಕೆಯಾಗಿದೆ. ಇನ್ನು ಒಂದೇ ದಿನದಲ್ಲಿ 73 ಮಂದಿ ಬಲಿಯಾದಿದ್ದು, ಸಾವಿನ ಸಂಖ್ಯೆ ಕೂಡ 1,147ಕ್ಕೆ ಏರಿಕೆಯಾಗಿದೆ.
ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಮಹಾರಾಷ್ಟ್ರ ರಾಜ್ಯದಲ್ಲಿಯೇ ಅತೀ ಹೆಚ್ಚು ಸೋಂಕಿತರ ಪ್ರಕರಣಗಳು ದಾಖಲಾಗಿವೆ. ಮಹಾರಾಷ್ಟ್ರದಲ್ಲಿ 10,478 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದರೆ, ಗುಜರಾತ್ 4,082, ದೆಹಲಿ 3,515, ಮಧ್ಯಪ್ರದೇಶ 2,660, ರಾಜಸ್ತಾನ 2,438, ಉತ್ತರಪ್ರದೇಶ 2,203, ತಮಿಳುನಾಡು 2,162, ಆಂಧ್ರಪ್ರದೇಶದಲ್ಲಿ 403 ಜನರಲ್ಲಿ ಸೋಂಕು ಪತ್ತೆಯಾಗಿದೆ.
Follow us on Social media