ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಹೋಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್, ಹೋಳಿ ಹಬ್ಬವು ಜನರ ಮನದಲ್ಲಿ, ಸಮಾಜದಲ್ಲಿ ಆನಂದ, ಶಾಂತಿ, ಸೌಹಾರ್ದತೆ ತುಂಬಲಿ ಎಂದು ಹಾರೈಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, “ಹೋಳಿ ಹಬ್ಬ ಎಲ್ಲರಿಗೂ ಸಂತೋಷ ತರಲಿ” ಎಂದು ಹಾರೈಸಿದ್ದಾರೆ.
ಆದಾಗ್ಯೂ, ಕೊರೋನಾ ವೈರಸ್ ಭೀತಿಯಿಂದ ರಾಷ್ಟ್ರಪತಿ ಭವನದಲ್ಲಿ ಹೋಳಿ ಮಿಲನ್ ಕಾರ್ಯಕ್ರಮ ಆಯೋಜಿಸಲಾಗಿಲ್ಲ.
“ಕೊರೋನಾ ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಜನರು ಗುಂಪುಗೂಡದಂತೆ ತಜ್ಞರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೋಳಿ ಮಿಲನ್ ಕಾರ್ಯಕ್ರಮ ರದ್ದುಪಡಿಸಲಾಗಿದೆ” ಎಂದು ಪ್ರಧಾನಿ ಮೋದಿ ಕಳೆದ ವಾರ ಟ್ವೀಟ್ ಮಾಡಿದ್ದರು.
Follow us on Social media