ನವದೆಹಲಿ: ದೇಶದ ರಕ್ಷಣೆ ಮತ್ತು ಸುರಕ್ಷತೆ ಬಗ್ಗೆ ಯಾವಾಗ ಮಾತನಾಡುತ್ತೀರಿ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ.
ದೇಶದ ಭೂ ಪ್ರದೇಶವನ್ನು ಚೀನಾ ಆಕ್ರಮಿಸಿಕೊಂಡಿದೆ ಎಂದು ಆರೋಪಿಸುತ್ತಿರುವ ರಾಹುಲ್ ಗಾಂಧಿ, ಲಡಾಖ್ ನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ (ಎಲ್ ಎಸಿ)ಚೀನಾದೊಂದಿಗಿನ ವಿವಾದ ಬಗ್ಗೆ ಕೆಲ ಪ್ರಶ್ನೆಗಳನ್ನು ಮುಂದಿಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಂದ ಉತ್ತರವನ್ನು ಬಯಸಿದ್ದಾರೆ.
ದೇಶದ ರಕ್ಷಣೆ ಮತ್ತು ಸುರಕ್ಷತೆ ಬಗ್ಗೆ ಯಾವಾಗ ಮಾತನಾಡುತ್ತೀರಿ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ.
ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜಿವಾಲಾ ಕೂಡಾ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ನೇಪಾಳ ಕೂಡಾ
ಮೊದಲ ಬಾರಿಗೆ ಭಾರತದ ಗಡಿಯಲ್ಲಿ ಸೇನೆ ನಿಯೋಜಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಮಾತ್ರ ಇದು ಸಾಧ್ಯ ಎಂದು ಹೇಳಿದ್ದಾರೆ.
ನೇಪಾಳ ಮೊದಲ ಬಾರಿಗೆ ಗಡಿಯಲ್ಲಿ ಸೇನೆ ನಿಯೋಜಿಸಿರುವ ವರದಿಯನ್ನು ಸುರ್ಜಿವಾಲಾ ತಮ್ಮ ಟ್ವಿಟರ್ ಖಾತೆಯಲ್ಲಿ ಟ್ಯಾಗ್ ಮಾಡಿದ್ದಾರೆ.
Follow us on Social media