ನವದೆಹಲಿ: ಇಂದು 74 ಸ್ವಾತಂತ್ರ್ಯ ದಿನಾಚರಣೆ. ಕೊರೊನಾ ಭೀತಿ ನಡುವೆ ಮುನ್ನೆಚ್ಚರಿಕೆ ವಹಿಸಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಅವರು ಧ್ವಜಾರೋಹಣ ಮಾಡಿದ್ದಾರೆ.
ಈ ಬಾರಿ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು, ಕೆಂಪುಕೋಟೆಯನ್ನು ಮದುವಣಗಿತ್ತಿಯಂತೆ ಶೃಂಗಾರ ಮಾಡಲಾಗಿದೆ. ಮೊದಲಿಗೆ ಪ್ರಧಾನಿ ನರೇಂದ್ರ ಮೋದಿ ಮಹಾತ್ಮ ಗಾಂಧಿ ಸಮಾಧಿ ರಾಜ್‍ಘಾಟ್‍ಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು. ನಂತರ ಕೆಂಪು ಕೋಟೆಯ ಮುಖ್ಯ ದ್ವಾರಕ್ಕೆ ಆಗಮಿಸುತ್ತಿದ್ದಂತೆ ಮೂರು ಸೇನೆಯಿಂದ ಮೋದಿ ಅವರಿಗೆ ಗೌರವ ಸಲ್ಲಿಸಿದ್ದಾರೆ. ನಂತರ ಮೋದಿ ಧ್ವಜಾರೋಹಣ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ಸಾಕಷ್ಟು ಬಿಗಿ ಭದ್ರತೆ ವಹಿಸಲಾಗಿತ್ತು. ಎನ್‍ಎಸ್‍ಜಿ, ಎಸ್ಪಿಜಿ, ಸಿಆರ್‌ಪಿಎಫ್, ಬಿಎಸ್‍ಎಫ್, ದೆಹಲಿ ಪೊಲಿಸ್ ಸೇರಿದಂತೆ 4,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಅಲ್ಲದೇ 30ಕ್ಕೂ ಅಧಿಕ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಬಾರಿ ಸಾರ್ವಜನಿಕರಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ಇಲ್ಲ. ಕೇವಲ ಮುಖ್ಯ ಅಥಿತಿಗಳಿಗೆ ಕುಟುಂಬಸ್ಥರಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದ್ದು, ಸಾಮಾಜಿಕ ಅಂತರದಡಿ ಆಸನಗಳ ವ್ಯವಸ್ಥೆ ಮಾಡಲಾಗಿದೆ.
Follow us on Social media