ಧರ್ಮಶಾಲಾ :ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಹಣಾಹಣಿ ಗುಡ್ಡಗಳ ನಾಡು ಧರ್ಮಶಾಲಾದಲ್ಲಿ ನಡೆಯಲಿದೆ.
ಕೋವಿಡ್-19 ಆತಂಕದಿಂದ ಭಾರತ ಸೇರಿದಂತೆ ವಿಶ್ವಾದ್ಯಂತ ಬಹುತೇಕ ಕ್ರೀಡಾ ಟೂರ್ನಿಗಳನ್ನು ಮುಂದೂಡಲಾಗಿದೆ ಅಥವಾ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇದರ ನಡುವೆಯೂ ಭಾರತ -ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಟೂರ್ನಿ ಆಯೋಜನೆಗೊಂಡಿರುವುದು ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ.