ಧಾರವಾಡ: ಬಸ್ ಹಾಗೂ ಇನ್ನೋವಾ ಕಾರು ನಡುವೆ ಪರಸ್ಪರ ಢಿಕ್ಕಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡದ ಸೋಮಾಪುರ ಗ್ರಾಮದ ಬಳಿ ನಡೆದಿದೆ.
ಘಟನೆಯ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರು ಚಾಲಕನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವನಹಳ್ಳಿಯಿಂದ ಧಾರವಾಡದ ಕಡೆಗೆ ಹೋಗುತ್ತಿದ್ದ ಬಸ್ಸಿಗೆ ಧಾರವಾಡದಿಂದ ರೋಣಕ್ಕೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದಿದೆ.
ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Follow us on Social media