ನವದೆಹಲಿ: ಗುರುವಾರ ಇಲ್ಲಿನ ಸರ್ ಗಂಗ ರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ
ಇಂದು ಮಧ್ಯಾಹ್ನ ಬಿಡುಗಡೆಯಾಗಿದ್ದಾರೆ ಎಂದು ಹಿರಿಯ ವೈದ್ಯರೊಬ್ಬರು ತಿಳಿಸಿದ್ದಾರೆ.
ವಾಡಿಕೆಯ ಪರೀಕ್ಷೆ,ತಪಾಸಣೆಗಾಗಿ ವೈದ್ಯರ ಕರೆಯ ಮೇರೆಗೆ ಗುರುವಾರ ಗುರುವಾರ 73 ವರ್ಷದ ಸೋನಿಯಾ
ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದರು.
ಜುಲೈ 30 ರಂದು ಗಂಗ ರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾ ಗಾಂಧಿ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅವರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ ಎಂದು ಆಸ್ರತ್ರೆಯ ಆಡಳಿತ ಮಂಡಳಿ ತಿಳಿಸಿದೆ.
ಕೊರೋನಾವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಎದುರಾಗಿರುವ ರಾಜಕೀಯ ಪರಿಸ್ಥಿತಿ ಕುರಿತಂತೆ ರಾಜ್ಯಸಭಾ ಸದಸ್ಯರೊಂದಿಗೆ ಗುರುವಾರ ಸೋನಿಯಾ ಗಾಂಧಿ ನಡೆಸಿದ ಸಭೆಯಲ್ಲಿ ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಮತ್ತಿತರ ಪಕ್ಷದ ಹಿರಿಯ ನಾಯಕರು ಪಾಲ್ಗೊಂಡಿದ್ದರು.
Follow us on Social media