ಮಂಗಳೂರು: ಕುಲಶೇಖರ ಡೇರಿ ಸಮೀಪ ಶುಕ್ರವಾರ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕ ಮೂಡುಪೆರಾರಿನ ಅರಿಕೆಪದವು ನಿವಾಸಿ ಮಹಾಬಲ ಗೌಡ(೪೭) ಸಾವನ್ನಪ್ಪಿದ್ದಾರೆ.
ಮಧ್ಯಾಹ್ನ ವೇಳೆ ಕಟ್ಟಡದ ೨ನೇ ಮಹಡಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅವರು ಆಯತಪ್ಪಿ ೧ನೇ ಮಹಡಿಗೆ ಬಿದ್ದಿದ್ದರು. ತೀವ್ರ ಗಾಯಗೊಂಡಿದ್ದ ಅವರನ್ನು ಸ್ಥಳದಲ್ಲಿದ್ದ ಕಾರ್ಮಿ ಕರು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಷ್ಟರಲ್ಲಿಯೇ ಅವರು ಸಾವನ್ನಪ್ಪಿರುವುದಾಗಿ ಪರೀಕ್ಷಿಸಿದ ವೈದ್ಯರು ತಿಳಿಸಿದರು. ಮೃತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕಂಕನಾಡಿ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.