ಮಂಗಳೂರು : ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ ಎಂಬುದು ಡಿಕೆಶಿ ಅವರ ಹಗಲುಗನಸು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಡಿಕೆಶಿಗೆ ತಿರುಗೇಟು ನೀಡಿದ್ದಾರೆ.
ಬಿಜೆಪಿಯಲ್ಲಿ ಭಿನ್ನಾಭಿಪ್ರಾಯವಿದೆ ಎಂಬ ಸುದ್ದಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ರಾಜ್ಯದಲ್ಲಿ ಯಡಿಯೂರಪ್ಪ ನಾಯಕತ್ವದಲ್ಲಿ ಬಿಜೆಪಿ ಸರ್ಕಾರ ಮುಂದುವರಿಯುತ್ತದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
ಅಭಿವೃದ್ಧಿ ದೃಷ್ಟಿಯಿಂದ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದು ಪಕ್ಷದೊಳಗೆ ಯಾವುದೇ ಅಶಿಸ್ತನ್ನು ಸಹಿಸಲಾಗದು. ಈ ಕುರಿತಾಗಿ ಹೈಕಮಾಂಡ್ ಶಿಸ್ತು ಕ್ರಮ ಕೈಗೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರು ಬಿಜೆಪಿಯಲ್ಲಿ ಭಿನ್ನಾಭಿಪ್ರಾಯವಿದೆ ಎಂಬ ಹಗಲುಗನಸನ್ನು ಕಾಣುತ್ತಿದ್ದಾರೆ. ಆದರೆ ಸರ್ಕಾರ ಪೂರ್ಣಾವಧಿಯನ್ನು ಯಶಸ್ವಿಯಾಗಿ ಪೂರೈಸುತ್ತದೆ. ಯಡಿಯೂರಪ್ಪನವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳಿದ್ದಾರೆ.
Follow us on Social media