ಕೊಲ್ಕೋತಾ: ದೀರ್ಘ ಕಾಲದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಅಬನಿ ಮೋಹನ್ ಜೋರ್ದಾರ್ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.
ಮಾಜಿ ಐಪಿಎಸ್ ಅಧಿಕಾರಿಯಾಗಿದ್ದ ಜೋರ್ದಾರ್ 2010 ರಲ್ಲಿ ತೃಣಮೂಲ ಕಾಂಗ್ರೆಸ್ ಸೇರಿದ್ದರು. 2011 ರಲ್ಲಿ ಕೃಷ್ಣಾ ನಗರ ಉತ್ತರ
ವಿಧಾನಸಭೆ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.
ಅವರು ಟಿಎಂಸಿ ಸರ್ಕಾರದಲ್ಲಿ ತಿದ್ದುಪಡಿ ಸೇವೆಗಳ ಖಾತೆಯನ್ನು ಹೊಂದಿದ್ದರು. ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹಲವು ದಿನಗಳಿಂದ ಹಾಸಿಗೆ ಹಿಡಿದಿದ್ದರು. ಜೋರ್ದಾರ್ ನಿಧನಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ.
Follow us on Social media