ಪುತ್ತೂರು : ರಾಜಸ್ಥಾನದ ಉದಯಪುರದಲ್ಲಿ ವ್ಯಕ್ತಿಯ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ ನಡೆಸಿ ಭೀಕರ ಕೃತ್ಯವನ್ನು ಕಟು ಶಬ್ದಗಳಿಂದ ಖಂಡಿಸಿತು.
ದೊಂದಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಪುತ್ತೂರಿನ ದರ್ಬೆ ವೃತ್ತದಲ್ಲಿ ಘಟನೆಯನ್ನು ಖಂಡಿಸಿದರು.
ಈ ಸಂದರ್ಭ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರಾಜಸ್ಥಾನಲ್ಲಿ ಹಿಂದೂ ವ್ಯಕ್ತಿ ಹತ್ಯೆಯ ನೇರ ಹೊಣೆ ಆಶೋಕ್ ಗೆಹ್ಲೋಟ್ ವಹಿಸಬೇಕು ಮತ್ತು ಕೇಂದ್ರ ಸರಕಾರ ರಾಜ್ಯ ಸರ್ಕಾರವನ್ನು ವಜಾ ಗೊಳಿಸಿ ತಕ್ಷಣವೇ ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕು ಎಂದು ಆಗ್ರಹಿಸಿದರು.
ಕರಾವಳಿ ಜಿಲ್ಲೆಗಳಲ್ಲೂಇಂಥಹ ಘಟನೆಗಳು ಮುಂದಿನ ದಿನಗಳಲ್ಲಿ ನಡೆಯಬಹುದು ಎಂದು ಎಚ್ಚರಿಸಿದ ಅವರು ಹಿಂದೂಗಳೆಲ್ಲಾ ಒಗ್ಗಟ್ಟಾಗಿ ಮತಾಂಥ ಶಕ್ತಿಗಳನ್ನು ತಡೆಯಬೇಕಿದೆ.
ಇನ್ನು ಇದೇ ಕೃತ್ಯ ಮರುಕಳಿಸಿದರೆ ಹಿಂದೂಗಳು ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಅರುಣ್ ಕುಮಾರ್ ಪುತ್ತಿಲ ಎಚ್ಚರಿಕೆ ನೀಡಿದ್ದಾರೆ.
Follow us on Social media