ಪುತ್ತೂರು : ಕೋಳಿ ಫಾರ್ಮ್‌ನಲ್ಲಿ ಕೆಲಸಕ್ಕಿದ್ದ ಮಹಿಳೆಯ ಮೇಲೆ ಫಾರ್ಮಿನ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ವ್ಯಕ್ತಿಯೋರ್ವ ಅತ್ಯಾಚಾರವೆಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತಂತೆ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದೆ.
ಅರಿಯಡ್ಕ ಗ್ರಾಮದ ಮಡ್ಯಂಗಳ ಎಂಬಲ್ಲಿರುವ ಕೋಳಿ ಫಾರ್ಮ್‌ವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವ ಅಲ್ಲೇ ಕೆಲಸಕ್ಕಿದ್ದ ಮಹಿಳೆಯ ಮೇಲೆ ಒತ್ತಾಯ ಪೂರ್ವಕವಾಗಿ ಅತ್ಯಾಚಾರ ಎಸಗಿದ್ದಾರೆ. ಮಾತ್ರವಲ್ಲದೆ, ಬಳಿಕ ವೀಡಿಯೋ ಚಿತ್ರೋಕರಿಸಿದ್ದಾನೆ ಎಂದು ತಿಳಿದುಬಂದಿದೆ. ಸಾಲದ್ದಕ್ಕೆ ಮಹಿಳೆಯ ಪತಿಗೂ ಆ ವೀಡಿಯೋ ಕಳುಹಿಸಿದ್ದ ಎನ್ನಲಾಗಿದೆ. ಬಳಿಕ ಪದೇ ಪದೇ ಆತನೊಂದಿಗೆ ಸೇರಲು ಒತ್ತಾಯಿಸುತ್ತಿದ್ದ ಎನ್ನಲಾಗಿದೆ.
ಮೇ 5ರಂದು ಕೃತ್ಯ ನಡೆದಿದ್ದು, ಆರೋಪಿಯ ವಿರುದ್ದ ಮಹಿಳೆಯು ಸಂಪ್ಯ ಠಾಣೆಗೆ ದೂರು ನೀಡಿದ್ದಾರೆ.
Follow us on Social media