ಪುತ್ತೂರು : ಏ 29 : ರಾಜ್ಯದ ಗಮನ ಸೆಳೆದಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಕಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಮೊದಲ ಬಾರಿಗೆ ಅಭ್ಯರ್ಥಿಯ ಚುನಾವಣಾ ಏಜೆಂಟ್ ಮತ್ತೊರ್ವ ಅಭ್ಯರ್ಥಿಯ ಪರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ . ಭಾರತೀಯ ಜನತಾ ಪಕ್ಷದ ಪುತ್ತೂರು ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರವರ ಚುನಾವಣಾ ಏಜೆಂಟ್ ರಾಜೇಶ್ ಬನ್ನೂರು ದೂರು ನೀಡಿದವರು.ಅವರು ಪಕ್ಷೇತರ ಅಭ್ಯರ್ಥಿ ಬಿಜೆಪಿಯ ಚಿಹ್ನೆ ಭಾವಚಿತ್ರ, ಪ್ರಧಾನಿ ಹೆಸರು ಭಾವಚಿತ್ರ, ದುರ್ಬಳಕೆ ಮಾಡುತ್ತಿದ್ದಾರೆಂದು ದೂರಿನಲ್ಲಿ ಆರೋಪಿಸಿದ್ದಾರೆ.
ಪುತ್ತೂರಿನ ಚುನಾವಣಾ ಕಣದಲ್ಲಿ 8 ಮಂದಿ ಅಭ್ಯರ್ಥಿಗಳಿದ್ದು, ಭಾರತೀಯ ಜನತಾ ಪಾರ್ಟಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಹಾಗೂ , ಪಕ್ಷೇತರರು ಸ್ಪರ್ಧಿಸುತ್ತಿದ್ದಾರೆ. ಈ ಪೈಕಿ ಓರ್ವ ಪಕ್ಷೇತರ ಅಭ್ಯರ್ಥಿ ತನ್ನ ಪ್ರಚಾರ ಸಾಮಾಗ್ರಿಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ, ಪತ್ರಿಕಾ ಪ್ರಟಕಣೆಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದೀಜಿಯವರ ಹೆಸರನ್ನು ಉಲ್ಲೇಖಿಸುತ್ತಿದ್ದಾರೆ ಹಾಗೂ ಭಾವಚಿತ್ರವನ್ನು ಉಪಯೋಗಿಸುತ್ತಿದ್ದು ಮತ್ತು ತಾನು ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಎಂದು ಬಿಂಬಿಸುತ್ತಿದ್ದಾರೆ ಎಂದು ದೂರಲಾಗಿದೆ.
ಆ ಪಕ್ಷೇತರ ಅಭ್ಯರ್ಥಿ ಚುನಾವಣಾ ಆಯೋಗ ತನಗೆ ನೀಡಿದ ಚಿಹ್ನೆಯನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡಬೇಕೇ ವಿನಃ ರಾಷ್ಟ್ರೀಯ ಪಕ್ಷವೊಂದರ ಚಿಹ್ನೆಯನ್ನು ಪ್ರಚಾರದದಲ್ಲಿ ಉಪಯೋಗಿಸುವುದು, ರಾಷ್ಟ್ರೀಯ ಪಕ್ಷದ ನಾಯಕರ ಭಾವಚಿತ್ರಗಳನ್ನು ಪ್ರಚಾರ ಕಾರ್ಯದಲ್ಲಿ ಕಾನೂನು ರೀತ್ಯಾ ಉಪಯೋಗಿಸುವಂತಿಲ್ಲ .
ಆದ್ದರಿಂದ ತಾವು ಈ ಕುರಿತು ಖುದ್ದು ಪರಿಶೀಲನೆ ನಡೆಸಿ, ಪುತ್ತೂರಿನ ಸ್ವತಂತ್ರ ಅಭ್ಯರ್ಥಿಯವರ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಕೋರಲಾಗಿದೆ.
Follow us on Social media