ಪುತ್ತೂರು: ರಾಷ್ಟ್ರಮಟ್ಟದಲ್ಲಿ ವೈಟ್‌ಲಿಫ್ಟರ್ ಆಗಿ ಗುರುತಿಸಿಕೊಂಡಿದ್ದ ಆಳ್ವಾಸ್ ಕಾಲೇಜಿನ ಕೋಚ್ ಓರ್ವರು ಹೃದಯಾಘಾತದಿಂದ ನಿಧನರಾಗಿದ್ದಾರೆ.ರಾಜೇಂದ್ರ ಪ್ರಸಾದ್ (39) ಹೃದಯಾಘಾತಕ್ಕೊಳಗಾದ ವ್ಯಕ್ತಿ.
ಮೂಲತಃ ಪುತ್ತೂರಿನ ಕೆಮ್ಮಿಂಜೆ ನಿವಾಸಿಯಾಗಿದ್ದ ಇವರು ಪುತ್ತೂರು ಫಿಲೋಮಿನಾ ಕಾಲೇಜಿನಲ್ಲಿ ಶಿಕ್ಷಣವನ್ನು ಪೂರೈಸಿದರು.
ಆ ಸಂದರ್ಭದಲ್ಲೇ ವೈಟ್‌ಲಿಫ್ಟರ್ ಆಗಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದರು.
ನಂತರ ಎಸ್‌ಡಿಎಂ ಕಾಲೇಜಿನಲ್ಲಿ ಕೂಡಾ ವೈಟ್‌ಲಿಫ್ಟರ್ ಕೋಚ್ ಆಗಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಆಳ್ವಾಸ್ ಕಾಲೇಜಿನಲ್ಲಿ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಇವರಿಂದ ಅನೇಕ ವಿದ್ಯಾರ್ಥಿಗಳು ತರಬೇತಿಯನ್ನು ಪಡೆದುಕೊಂಡಿದ್ದಾರೆ. ಮೇತರು ಪತ್ನಿ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
Follow us on Social media