ಪುಲ್ವಾಮಾ: ಬಾಂಡ್‌ಜೊ ಪ್ರದೇಶದಲ್ಲಿ ಮಂಗಳವಾರ ನಸುಕಿನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಗುಂಡೇಟಿನಿಂದ ಮೃತಪಟ್ಟಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಮೃತ ಉಗ್ರರು ಯಾವ ಸಂಘಟನೆಗೆ ಸೇರಿದವರು ಎಂಬ ಮಾಹಿತಿ ತಿಳಿದು ಬಂದಿಲ್ಲ. ಸದ್ಯ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
ಜಿಲ್ಲೆಯ ಕಪ್ರಾನ್ ಅರಣ್ಯ ಭಾಗದಲ್ಲಿ ಉಗ್ರರು ಇದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ, ಭದ್ರತಾ ಪಡೆ ಸಿಬ್ಬಂದಿ ಶೋಧ ಕೈಗೊಂಡಿದ್ದರು.
ಇದೇ ವೇಳೆ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಯೋಧ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಮೂರು ಮಂದಿ ಉಗ್ರರು ಇರುವ ಶಂಕೆ ವ್ಯಕ್ತವಾಗಿದೆ. ಇನ್ನು ಮೃತ ಉಗ್ರರಿಂದ 2 ಎಕೆ 47 ಬಂದೂಕುಗಳನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಭಾರತೀಯ ಸೇನಾ ವಕ್ತಾರರು ತಿಳಿಸಿದ್ದಾರೆ.
Follow us on Social media