ಜಮ್ಮು- ಕಾಶ್ಮೀರ: ಏಪ್ರಿಲ್ 18 (ಯು.ಎನ್.ಐ.) ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ರೈಲ್ವೆ ರಕ್ಷಣಾ ಪಡೆಯ ಇಬ್ಬರು ಸಿಬ್ಬಂದಿ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಹೆಡ್ ಕಾನ್‌ಸ್ಟೇಬಲ್ ಸುರಿಂದರ್ ಸಿಂಗ್ ಮತ್ತು ಸಹಾಯಕ ಸಬ್ ಇನ್‌ಸ್ಪೆಕ್ಟರ್ ದೇವರಾಜ್ ಅವರ ಮೇಲೆ ಕಾಕಪೋರಾದ ಟೀ ಸ್ಟಾಲ್ ಬಳಿ ಗುಂಡು ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇಬ್ಬರನ್ನೂ ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಹೆಡ್ ಕಾನ್‌ಸ್ಟೇಬಲ್ ಸುರೀಂದರ್ ಸಿಂಗ್ ಅವರು ಆಸ್ಪತ್ರೆಗೆ ಹೋಗುವಷ್ಟರಲ್ಲೇ ಮೃತಪಟ್ಟಿದ್ದರು.
ಶೋಧ ಕಾರ್ಯಾಚರಣೆ ವೇಳೆ ದಾಳಿಕೋರರು ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಏಪ್ರಿಲ್ 24 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಮುನ್ನ ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳು ಹೆಚ್ಚಾಗುತ್ತಿವೆ. ಜಮ್ಮು ಬಳಿ ಪ್ರಧಾನ ರ್ಯಾಲಿಯನ್ನುದ್ದೇಶಿಸಿ ಪ್ರಧಾನಿ ಮೋದಿ ಅವರು ಪಂಚಾಯತ್ ರಾಜ್ ದಿನದ ಹಿನ್ನೆಲೆಯಲ್ಲಿ ಏಪ್ರಿಲ್ 24 ರಂದು ಸಾವಿರಾರು ಪಂಚಾಯತ್ ಸದಸ್ಯರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಕಳೆದ ಮೂರು ವಾರಗಳಿಂದ ಕಾಶ್ಮೀರ ಕಣಿವೆಯಲ್ಲಿ ಭದ್ರತಾ ಪಡೆಗಳು ಮತ್ತು ನಾಗರಿಕರ ಮೇಲೆ ಉಗ್ರರು ದಾಳಿಗಳನ್ನು ನಡೆಸುತ್ತಿದ್ದಾರೆ. ಇದು ಈ ತಿಂಗಳ ಒಂಭತ್ತನೇ ದಾಳಿಯಾಗಿದೆ. ಉದ್ಯೋಗ ಅರಸಿ ಜಮ್ಮು ಮತ್ತು ಕಾಶ್ಮೀರಕ್ಕೆ ಬಂದವರ ಮೇಲೆ ಹಾಗು ಸ್ಥಳೀಯ ಕಾಶ್ಮೀರಿ ಪಂಡಿತರ ಮೇಲೂ ಹೆಚ್ಚಿನ ಹತ್ಯೆಗಳು ನಡೀತಿವೆ
Follow us on Social media