ನವದೆಹಲಿ: ಪೊಲೀಸ್ ಗಸ್ತು ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಪೊಲೀಸ್ ಸಾವಿಗೀಡಾಗಿ, ಮತ್ತೋರ್ವರು
ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಳೆದ ರಾತ್ರಿ ನಡೆದಿದೆ.
ಖಾಲ್ಸಾ ಬಳಿ ಕಳೆದ ರಾತ್ರಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಕಾರು, ಪೊಲೀಸ್ ಗಸ್ತು ವಾಹನಕ್ಕೆ ಡಿಕ್ಕಿ ಹೊಡೆದಿರುವುದಾಗಿ
ಪೊಲೀಸರು ತಿಳಿಸಿದ್ದಾರೆ.
ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಪೊಲೀಸ್ ಗಸ್ತು ವಾಹನ ಜಖಂಗೊಂಡಿದೆ.ಕಾರು ಚಾಲಕ ಮದ್ಯದ ನಶೆಯಲ್ಲಿರುವುದು ಕಂಡುಬಂದಿದ್ದು, ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ ಎಂದು ಉತ್ತರ ದೆಹಲಿ ಡಿಸಿಪಿ ಮೊನಿಕಾ ಭಾರದ್ವಾಜ್ ತಿಳಿಸಿದ್ದಾರೆ.
Follow us on Social media