ಬೆಂಗಳೂರು: ಸಂಜಯ ನಗರದ ಪೇದೆಗಳ ಮೇಲೆ ಹಲ್ಲೆಗೈದಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿದ್ದಾರೆ.
ಆರೋಪಿ ತಾಜುದ್ದೀನ್ ಸಂಜಯ ನಗರದಲ್ಲಿ ಬುಧವಾರ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ್ದ. ಈ ಸಂಬಂಧ ಆತನನ್ನು ವಶಕ್ಕೆ ಪಡೆದಿದ್ದ ಪೊಲೀಸರು ರಾತ್ರಿ ಸ್ಥಳ ಮಹಜರು ಮಾಡಲು ಕರೆದೊಯ್ದಿದ್ದರು. ಈ ವೇಳೆ ತಾಜುದ್ದೀನ್ ಪೊಲೀಸರ ಮೇಲೆ ಕಲ್ಲು ಎಸೆದು ಎಸ್ಕೇಪ್ ಆಗಲು ಯತ್ನಿಸಿದ್ದ. ಇದರಿಂದಾಗಿ ಸಂಜಯನಗರ ಪೊಲೀಸ್ ಇನ್ಸ್‌ಪೆಕ್ಟರ್ ಬಾಲಾಜಿ ಅವರು ಆರೋಪಿ ಮೇಲೆ ಫೈರಿಂಗ್ ಮಾಡಿದ್ದಾರೆ. ಘಟನೆಯಲ್ಲಿ ಮಹಿಳಾ ಪಿಎಸ್‍ಐ ರೂಪಾ ಅವರ ಕೈಗೆ ಗಂಭೀರವಾಗಿ ಗಾಯವಾಗಿದೆ.
ಆರೋಪಿ ಹಾಗೂ ರೂಪಾ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.