ಮಂಗಳೂರು : ರಾಜ್ಯಾದ್ಯಂತ ಇಂದು ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ . ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಪ್ರಥಮ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.ಒಟ್ಟು ಪ್ರಥಮ ಪಿಯುಸಿಯಲ್ಲಿ 33498 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 386 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು.ಈ ಪೈಕಿ 30603 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಿರ್ಣರಾಗಿದ್ದು, 2509 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಜಿಲ್ಲೆಯಲ್ಲಿ ಶೇಕಡಾ 91.36 ರಷ್ಟು ಫಲಿತಾಂಶ ಇದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
Follow us on Social media