ಪಾಟ್ನಾ(ಬಿಹಾರ): ಸ್ವಾತಂತ್ರೋತ್ಸವದಂದು ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದ ಭಾಷಣಕ್ಕೆ ವ್ಯಂಗ್ಯವಾಡಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ತಿರುಗೇಟು ನೀಡಿದ್ದಾರೆ.
ಮೋದಿ ಅವರು ಕೆಂಪು ಕೋಟೆ ಮೇಲೆ ದೇಶಕ್ಕಾಗಿ ಹುತಾತ್ಮರಾದ ಯೋಧರ ತ್ಯಾಗ, ಬಲಿದಾನ ಸ್ಮರಿಸಿದ್ದರು. ಆದರೆ ರಾಹುಲ್ ಗಾಂಧಿ ಅವರು ಭಾರತೀಯ ಯೋಧರ ಮೇಲೆ ಮೋದಿ ಅವರಿಗೆ ನಂಬಿಕೆ ಇಲ್ಲ ಎಂದು ವ್ಯಂಗ್ಯವಾಡಿದ್ದು ಈ ವ್ಯಕ್ತಿಯ ಮಾತನ್ನು ಎಷ್ಟು ಗಂಭೀರವಾಗಿ ಪರಿಗಣಿಸಬೇಕು ಎಂದು ದೇಶವೇ ನಿರ್ಧರಿಸಬೇಕು ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಭಾಷಣದ ಬಳಿಕ ಪ್ರತಿಕ್ರಿಯಿಸಿದ್ದ ರಾಹುಲ್ ಗಾಂಧಿ ಅವರು, ಪೂರ್ವ ಲಡಾಖ್ ನ ಗಾಲ್ವಾನ್ ಕಣಿವೆ ಘರ್ಷಣೆ ವಿಚಾರದಲ್ಲಿ ಪ್ರಧಾನಿ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿದ್ದರು.
ಪ್ರಧಾನಿಯನ್ನು ಹೊರತುಪಡಿಸಿ ದೇಶದ ಪ್ರತಿಯೊಬ್ಬರೂ ಭಾರತೀಯ ಸೇನೆಯ ಸಾಮರ್ಥ್ಯ, ಧೈರ್ಯದ ಬಗ್ಗೆ ನಂಬಿಕೆಯಿಟ್ಟಿದ್ದಾರೆ, ಪ್ರಧಾನಿಯವರ ಹೇಡಿತನದಿಂದಾಗಿ ಚೀನಾ ಭಾರತದ ಪ್ರದೇಶವನ್ನು ಆಕ್ರಮಿಸಿಕೊಳ್ಳುತ್ತಿದೆ. ದೇಶದ ಪ್ರಧಾನಿಯಾಗಿ ನಮಗೆ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
Follow us on Social media