ಮುಂಬೈ: ಬಾಲಿವುಡ್’ನ ಖ್ಯಾತ ನೃತ್ಯ ಸಂಯೋಜಕಿ ಸರೋಜ್ ಖಾನ್ (71) ಅವರು ಶುಕ್ರವಾರ ವಿಧಿವಿಶರಾಗಿದ್ದಾರೆ.
ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಸರೋಜ್ ಖಾನ್ ಅವರನ್ನು ಬಾಂದ್ರಾದ ಗುರುನಾನಕ್ ಆಸ್ಪತ್ರೆಗೆ ಕೆಲ ದಿನಗಳ ಹಿಂದಷ್ಟೇ ದಾಖಲಿಸಲಾಗಿತ್ತು. ಆದರೆ, ಇಂದು ಬೆಳಕಿನ ಜಾವ 2 ಗಂಟೆ ಸುಮಾರಿಗೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಸರೋಜ್ ಖಾನ್ ಅವರನ್ನು ಕೊರೋನಾ ಪರೀಕ್ಷೆಗೆ ಕೂಡ ಒಳಪಡಿಸಲಾಗಿತ್ತು. ವೈದ್ಯಕೀಯ ವರದಿ ನೆಗೆಟಿವ್ ಬಂದಿತ್ತು. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಸರೋಜ್ ಖಾನ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.
ಸರೋಜ್ ಖಾನ್ ಅವರು 1974ರಲ್ಲಿ ಬಿಡುಗಡೆಯಾಗಿದ್ದ ಹಿಂದಿಯ ನಾಮ್ ಸಿನಿಮಾದ ಮೂಲಕ ನೃತ್ಯ ಸಂಯೋಜಕಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಸುಮಾರು 4 ದಶಕಗಳ ಕಾಲ ಚಿತ್ರರಂಗದಲ್ಲಿ ಸರೋಜ್ ಖಾನ್ ಅವರು ಕೆಲಸ ಮಾಡಿದ್ದಾರೆ. ಸುಮಾರು 2 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ.
ಏಕ್ ದೋ ತೀನ್, ಚೋಲಿ ಕೆ ಪೀಚೆ ಕ್ಯಾಹೆ, ಡೋಲಾ ರೆ ಡೋಲಾ ಸೇರಿದಂತೆ ಇನ್ನೂ ಅನೇತ ಸೂಪರ್ ಹಿಟ್ ಹಾಡುಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಇನ್ನು ಸರೋಜ್ ಖಾನ್ ಅವರಿಗೆ 3 ಬಾರಿ ರಾಷ್ಟ್ರ ಪ್ರಶಸ್ತಿಗಳೂ ಕೂಡ ಲಭಿಸಿವೆ.
Follow us on Social media