ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಮಂಗಳವಾರ ಒಂದೇ ದಿನ ಬರೋಬ್ಬರಿ 15 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇನ್ನು ರಾಜ್ಯದಲ್ಲಿ ಇಂದು 1498 ಮಂದಿ ಕೊರೋನಾಗೆ ತುತ್ತಾಗಿದ್ದಾರೆ.
ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 800 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 1498 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 26,815ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಲ್ಲಿಯವರೆಗೂ ಕೊರೋನಾಗೆ ಒಟ್ಟು 416 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, 571 ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಚೇತರಿಕೆ ಕಂಡವರ ಸಂಖ್ಯೆ 11098ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 15297 ಸಕ್ರಿಯ ಪ್ರಕರಣಗಳಿವೆ.
Follow us on Social media