ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಕೋವಿಡ್ ಸೋಂಕು ಮುಂದಿನ ಹಂತಗಳಲ್ಲಿ ಹರಡದಂತೆ ತಡೆಯಲು ಹೋಮ್ ಕ್ವಾರಂಟೈನ್ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿ ಕಡ್ಡಾಯಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಈ ನಿಯಮಗಳ ಪಾಲನೆಯ ಮೇಲ್ವಿಚಾರಣೆ ನಡೆಸಲು ಸ್ವಯಂ ಸೇವಕರಾಗಿ ನೀವೂ ಸಹ ಕಾರ್ಯ ನಿರ್ವಹಿಸಬಹುದು ಎಂದು ಬೆಂಗಳೂರು ಜನತೆಯಲ್ಲಿ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.
ಸರ್ಕಾರದ ಹೋರಾಟದೊಂದಿಗೆ ಜತೆಯಾಗಲು ಸ್ವಯಂಪ್ರೇರಿತರಾಗಿ ನೋಂದಾಯಿಸಿಕೊಳ್ಳುವ ಮೂಲಕ ಸೋಂಕು ನಿಯಂತ್ರಿಸುವ ಕೆಲಸದಲ್ಲಿ ಕೈಜೋಡಿಸಬಹುದು. ಬಿಬಿಎಂಪಿಯ ನಾಗರಿಕ ಕ್ವಾರಂಟೈನ್ ಸ್ಕ್ವಾಡ್ ಸದಸ್ಯರಾಗಲು ನಿಮ್ಮ ಮೊಬೈಲ್ ಸಂಖ್ಯೆಯನ್ನು https://register.quarantinesquad.in/#/p/register ಲಿಂಕ್ ನಲ್ಲಿ ದಾಖಲಿಸಿ ನೋಂದಾಯಿಸಿಕೊಳ್ಳಬಹುದು ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
