ಬೆಂಗಳೂರು: ಬೆಂಗಳೂರಿನಲ್ಲಿ 146 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು ರಾಜ್ಯದಲ್ಲಿ ಒಟ್ಟು ಓಮಿಕ್ರಾನ್ ಸೋಂಕು 479ಕ್ಕೆ ಏರಿಕೆಯಾಗಿದೆ.
ಇನ್ನು ರಾಜ್ಯಾದ್ಯಂತ 24 ಗಂಟೆಗಳಲ್ಲಿ 11,698 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, ನಾಲ್ವರು ಕೋವಿಡ್-19 ಸೋಂಕಿನಿಂದ ಸಾವನ್ನಪ್ಪಿದ್ದಾರೆ (ಬೆಂಗಳೂರು-2) ಬೆಂಗಳೂರು ಒಂದರಲ್ಲೇ 9,221 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್-19 ಪಾಸಿಟಿವಿಟಿ ದರ 7.77%ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 1,148 ಕೋವಿಡ್-19 ನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿ 60,148 ಏರಿಕೆಯಾಗಿದ್ದು, ಬೆಂಗಳೂರು ಒಂದರಲ್ಲೇ 49 ಸಾವಿರ ದಾಟಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
Follow us on Social media