Breaking News

ಬೆಂಗಳೂರು : ಓವರ್ ಟೇಕ್ ಭರದಲ್ಲಿ ಬಸ್​​ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಬೆಂಗಳೂರು : ಓವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಬಸ್​​ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಗ್ರಾಮದ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಯಲಹಂಕ ತಾಲೂಕಿನ ತಿಂಡ್ಲು ಗ್ರಾಮದ ಮಂಜುನಾಥ್ (24) ಹಾಗೂ ನಿಖಿಲ್ (19) ಮೃತರು.

ಇವರು ಬೈಕ್​​ನಲ್ಲಿ ಗೌರಿಬಿದನೂರು ಕಡೆಯಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದರು.

ಮುಂದಿನ ವಾಹನವನ್ನ ಓವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಖಾಸಗಿ ಬಸ್​ಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×