ಬೆಳಗಾವಿ : ಜೆಡಿಎಸ್ ಪಕ್ಷದ ತತ್ವ, ಸಿದ್ದಾಂತಗಳನ್ನು ಒಪ್ಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪಕ್ಷ ಸೇರುವುದಾದರೆ ಸ್ವಾಗತ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಜನರ ಪಕ್ಷ. ಜಾರಕಿಹೊಳಿ ಅಥವಾ ಯಾರೇ ಆಗಲಿ. ಅವರು ಪಕ್ಷದ ತತ್ವ, ಸಿದ್ದಾಂತಗಳನ್ನು ಒಪ್ಪಿ ಬಂದಲ್ಲಿ ಖಂಡಿತವಾಗಿಯೂ ಜಿಲ್ಲಾ ಮಟ್ಟದ ನಾಯಕರೊಂದಿಗೆ ಚರ್ಚಿಸಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಗುವುದು ಎಂದರು.
ಮುಂಬರುವ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ನಾನು ರಾಜ್ಯ ಪ್ರವಾಸ ಕೈಗೊಂಡಿದ್ದೇವೆ. ಮಾಜಿ ಪ್ರಧಾನಿ ದೇವೇಗೌಡ ಅವರೂ ಪ್ರವಾಸಕ್ಕೆ ಬರುತ್ತಿದ್ದಾರೆ. ಪಕ್ಷ ಸಂಘಟನೆ ಮತ್ತು ಜೆಡಿಎಸ್‌ನ ಧ್ಯೇಯೋದ್ದೇಶವನ್ನು ಜನರಿಗೆ ತಲುಪಿಸುವ ಉದ್ದೇಶ ನಮ್ಮದು ಎಂದವರು ತಿಳಿಸಿದರು.
ಜನರೊಂದಿಗೆ ನೇರವಾಗಿ ಸಂಪರ್ಕ ಸಾಧಿಸುತ್ತಿದ್ದೇವೆ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಕೆಲಸ ಮಾಡುತ್ತಿದೆ. ಈ ಬಾರೊ ರಾಜ್ಯದಲ್ಲಿ ಜೆಡಿಎಸ್ ಖಂಡಿತಾ ಅಧಿಕಾರ ಹಿಡಿಯಲಿದೆ ಎಂದು ಸಿ.ಎಂ. ಇಬ್ರಾಹಿಂ ವಿಶ್ವಾಸ ವ್ಯಕ್ತಪಡಿಸಿದರು.
Follow us on Social media