ಬೆಳ್ತಂಗಡಿ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.
ಇಲ್ಲಿನ ಇಂದಬೆಟ್ಟು ಗ್ರಾಮದ ಕೊಪ್ಪದ ಕೋಡಿ ನಿವಾಸಿ ದೇವಕಿ ಎಂಬವರ ಪುತ್ರಿ 26 ವರ್ಷದ ಕೌಶಲ್ಯ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಇವರು ವಿಷ ಸೇವಿಸಿ ಆತ್ಮ ಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದು ಬಂದಿದೆ.
ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿಯೊಬ್ಬರ ಜೊತೆ ಪ್ರೀತಿಸಿ ಮದುವೆಯಾಗಿದ್ದರು.
ಎರಡು ದಿನಗಳ ಹಿಂದೆ ವಿಷ ಸೇವಿಸಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on Social media