ನವದೆಹಲಿ: ಭಾರತದಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 20,903 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,25,544ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.
ಇನ್ನು ಒಂದೇ ದಿನ 379 ಮಂದಿ ಮಹಾಮಾರಿ ವೈರಸ್’ಗೆ ಬಲಿಯಾಗಿದ್ದು, ಈ ವರೆಗೂ ಸಾವನ್ನಪ್ಪಿದವರ ಸಂಖ್ಯೆ 18213ಕ್ಕೆ ತಲುಪಿದೆ.
ಇನ್ನು 6,25,544 ಮಂದಿ ಸೋಂಕಿರ ಪೈಕಿ ಈ ವರೆಗೂ 3,79,892 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಪ್ರಸ್ತುತ ದೇಶದಲ್ಲಿನ್ನೂ 2,27,439 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.
ಮಹಾರಾಷ್ಟ್ರದಲ್ಲಿ ಒಂದೇ ದಿನ ಮತ್ತೆ ದಾಖಲೆಯ 6330 ಮಂದಿಗೆ ಮಾರಕ ಕೊರೋನಾ ವೈರಸ್ ಇರುವುದು ದೃಢಪಟ್ಟಿದೆ. ತಮಿಳುನಾಡಿನಲ್ಲೂ 4300ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು ಮಹಾರಾಷ್ಟ್ರದಲ್ಲಿ 125, ತಮಿಳುನಾಡಿನಲ್ಲಿ 57, ದೆಹಲಿಯಲ್ಲಿ 61, ಕರ್ನಾಟಕ 19, ಪಶ್ಚಿಮ ಬಂಗಾಳ 16, ಜಮ್ಮು ಮತ್ತು ಕಾಶ್ಮೀರ 10, ಮಧ್ಯಪ್ರದೇಶದಲ್ಲಿ 8 ಮಂದಿ ಬಲಿಯಾಗಿದ್ದಾರೆ.
Follow us on Social media