ಒಡಿಶಾ: ಇಲ್ಲಿನ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಎರಡು ರೈಲು ಮುಖಾಮುಖಿ ಢಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ನೂರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಹಲವರು ಸಾವಿಗೀಡಾಗಿರುವ ಸಾಧ್ಯತೆ ಇದೆ.
ಹೌರಾದಿಂದ ಚೆನ್ನೈಗೆ ತೆರಳುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಬಾಲಸೋರ್‌ನಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ 3 ಸ್ಲೀಪರ್ ಕೋಚ್‌ಗಳನ್ನು ಬಿಟ್ಟು ಉಳಿದ ಬೋಗಿಗಳು ಹಳಿತಪ್ಪಿದವು.
ಬೋಗಿಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಸಿಕ್ಕಿಹಾಕಿಕೊಂಡಿದ್ದು, ಅವರನ್ನು ರಕ್ಷಿಸಲು ಸ್ಥಳೀಯ ಜನರು ಜಮಾಯಿಸಿದ್ದಾರೆ ಎಂದು ತಿಳಿದುಬಂದಿದೆ. ಈ ರೈಲು ಚೆನ್ನೈ ಸೆಂಟ್ರಲ್‌ನಿಂದ ಕೋಲ್ಕತ್ತಾದ ಶಾಲಿಮಾರ್ ರೈಲು ನಿಲ್ದಾಣಕ್ಕೆ ಹೋಗುತ್ತಿತ್ತು.
ಎರಡೂ ರೈಲುಗಳು ಒಂದೇ ಮಾರ್ಗದಲ್ಲಿ ಬಂದಿದ್ದರಿಂದ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸಿಗ್ನಲ್ ವೈಫಲ್ಯದಿಂದ ಎರಡೂ ರೈಲುಗಳು ಒಂದೇ ಹಳಿಯಲ್ಲಿ ಬಂದು ಡಿಕ್ಕಿ ಹೊಡೆದಿದೆ
Follow us on Social media