Breaking News

ಮಂಗಳೂರು: ‘ಅಕ್ರಮ ಜೂಜಾಟ ಗಮನಕ್ಕೆ ಬಂದಲ್ಲಿ ಮಾಹಿತಿ ನೀಡಿ’ – ಕಮೀಷನರ್‌ ವಿಕಾಸ್ ಕುಮಾರ್

ಮಂಗಳೂರು : ಮಂಗಳೂರು ನಗರದಲ್ಲಿ ಯಾವುದೇ ರೀತಿಯ ಅಕ್ರಮ ಜೂಜಾಟ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಸಾರ್ವಜನಿಕರ ಗಮನಕ್ಕೆ ಬಂದಲ್ಲಿ ಮಾಹಿತಿ ನೀಡಿ ಎಂದು ಮಂಗಳೂರು ಪೋಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಶ್‌ ಅವರು ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟನೆ ಹೊರಡಿಸಿರುವ ಅವರು, ಮಂಗಳೂರು ನಗರದಲ್ಲಿ ಯಾವುದೇ ರೀತಿಯ ಅಕ್ರಮ ಜೂಜಾಟ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಸಾರ್ವಜನಿಕರ ಗಮನಕ್ಕೆ ಬಂದಲ್ಲಿ ಅಕ್ರಮ ಚಟುವಟಿಕೆಗಳನ್ನು ನಡೆಸುವವರ ಬಗೆಗಿನ ಮಾಹಿತಿಯನ್ನು ಕಾನೂನು ಸುವ್ಯವಸ್ಥೆ ಡಿಸಿಪಿ ಅರುಣಾಂಗ್ಷುಗಿರಿ – ಮೊಬೈಲ್ ಸಂಖ್ಯೆ 9480802304, ಅಪರಾಧ ಮತ್ತು ಸಂಚಾರ ಡಿ.ಸಿ.ಪಿ ವಿನಯ್ ಗಾಂವ್‍ಕರ್ – ಮೊಬೈಲ್ ಸಂಖ್ಯೆ 9480802305 ಮತ್ತು ನಗರ ಪೊಲೀಸ್ ಕಂಟ್ರೋಲ್ ರೂಂ – ಮೊಬೈಲ್ ಸಂಖ್ಯೆ 9480802321, ದೂರವಾಣಿ ಸಂಖ್ಯೆ -0824 2220800 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಕಳೆದೆರಡು ತಿಂಗಳಲ್ಲಿ ₹71 ಲಕ್ಷದ ಮರಳು ಹಾಗೂ ₹14 ಲಕ್ಷ ಮೌಲ್ಯದ ಮಾದಕ ದ್ರವ್ಯ ವಶಕ್ಕೆ ಪಡೆಯಲಾಗಿದೆ. ಜುಲೈ ಮತ್ತು ಆಗಸ್ಟ್‌ ತಿಂಗಳಲ್ಲಿ ಮಾದಕ ದ್ರವ್ಯಕ್ಕೆ ಸಂಬಂಧಿಸಿ 6 ಪ್ರಕರಣಗಳು ದಾಖಲಾಗಿದ್ದು ₹14.80 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಹಾಗೆಯೇ ಕಳೆದ ಎರಡು ತಿಂಗಳಿನಲ್ಲಿ ಮಾದಕ ದ್ರವ್ಯಕ್ಕೆ ಸಂಬಂಧಿಸಿದ 6 ಪ್ರಕರಣಗಳಲ್ಲಿ ಒಟ್ಟು 10 ಆರೋಪಿಗಳನ್ನು ಬಂಧಿಸಲಾಗಿದೆ.

ಇನ್ನು ಅಕ್ರಮ ಮರಳುಗಾರಿಕೆಗೆ ಸಂಬಂಧಿಸಿದಂತೆ ಒಟ್ಟು 13 ಪ್ರಕರಣಗಳ ದಾಖಲಾಗಿದ್ದು ಮರಳು ಸಾಗಣೆಯ 14 ವಾಹನ, ಒಂದು ಡ್ರೆಜ್ಜಿಂಗ್‌ ಯಂತ್ರ ಸೇರಿ ಒಟ್ಟು ₹71,28,500 ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಹಾಗೆಯೇ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ ಈ 13 ಪ್ರಕರಣಗಳಲ್ಲಿ ಒಟ್ಟು 10 ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×