ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಜು.04 ರ ಶನಿವಾರ ಒಂದೇ ದಿನ ಜಿಲ್ಲೆಯಲ್ಲಿ ಮೂವರು ಕೊರೋನಾದಿಂದ ಬಲಿಯ್ತಾಗಿದ್ದಾರೆ.
ಇಂದು ಬೆಳಗ್ಗೆ ಸುಳ್ಯ ತಾಲೂಕಿನ ಕೆರೆಮೂಲೆ ನಿವಾಸಿ ವೃದ್ದೆ ಕೊರೊನಾಗೆ ಬಲಿಯಾಗಿದ್ದರು. ಇದೀಗ ಮತ್ತೆ ಇಬ್ಬರು ಸೇರಿ ಇಂದು ಒಟ್ಟು ಮೂವರು ಮೃತಪಟ್ಟಿದ್ದಾರೆ.
ಈ ನಡುವೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಶುಕ್ರವಾರ ಒಂದೇ ದಿನ ಜಿಲ್ಲೆಯಲ್ಲಿ 97ಪ್ರಕರಣ ದೃಡಪಟ್ಟಿತ್ತು. ಶುಕ್ರವಾರ ಜಿಲ್ಲಾಡಳಿತ ಬಿಡುಗಡೆ ಮಾಡಿದ ವರದಿಯಂತೆ ಸೋಂಕಿತರ ಸಂಖ್ಯೆ 1010 ಕ್ಕೆ ಏರಿಕೆ ಕಂಡಿತ್ತು.
Follow us on Social media